Breaking News

ಜೈಲಿನಿಂದ ಹೊರಬಂದ 24 ಗಂಟೆಯಲ್ಲೇ ರೌಡಿಶೀಟರ್‌ನ ಭೀಕರ ಹತ್ಯೆ! ಹಿಡಕಲ್ ಡ್ಯಾಂ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಸಮೀಪ ಗಡಿಪಾರು ಆದೇಶದಡಿ ಧಾರವಾಡ ಜೈಲಿನಲ್ಲಿದ್ದ ರೌಡಿಶೀಟರ್ ಮುತ್ತುಸ್ವಾಮಿ ಹೃದಯರಾಜ ಪಾಸ್ಕಲ್ (30) ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೀಡಾಗಿದ್ದಾನೆ. ಹಳೆ ವೈಷಮ್ಯವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಸ್ನೇಹಿತರೊಂದಿಗೆ ಹಿಡಕಲ್ ಡ್ಯಾಂ ಪ್ರದೇಶಕ್ಕೆ ತೆರಳಿದ್ದ ವೇಳೆ, ಮೊದಲೇ ಹೊಂಚುಹಾಕಿದ್ದ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದು, ದಾಳಿ ವೇಳೆ ಜೊತೆಗಿದ್ದ ಸ್ನೇಹಿತರು ಸ್ಥಳದಿಂದ ಓಡಿ ಹೋಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮುತ್ತುಸ್ವಾಮಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಯಮಕನಮರಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *