ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಸಂಬಂಧಿತ ಪ್ರಕರಣದಲ್ಲಿ ಅದೇ ಗ್ರಾಮದ 25 ವರ್ಷದ ಚರಣ್ ಬಿನ್ ಆನಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ವೈದ್ಯಕೀಯ ಪರೀಕ್ಷೆಯಲ್ಲಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಅಧಿಕಾರಿಗಳು ಕಡ್ಡಾಯವಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಯ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ವೈದ್ಯಕೀಯ ವರದಿ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
Check Also
ಅತ್ಯಾಚಾರ ಎಸೆಗಿದವರ ಮೇಲೆ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …
bigtvnews | Hubli Dharwad News | Kannada News | Karnataka News Hubli News | News In Hubli | Local news

