Breaking News

ಬೆಂಗಳೂರಿನಲ್ಲಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಶಾಲೆಯ ಸೆಕ್ರೆಟರಿ, ಪ್ರಿನ್ಸಿಪಾಲ್ ಹಾಗೂ ಶಿಕ್ಷಕರ ವಿರುದ್ಧ FIR ದಾಖಲು!

ಬೆಂಗಳೂರು ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಸೆಕ್ರೆಟರಿ, ಪ್ರಿನ್ಸಿಪಾಲ್ ಹಾಗೂ ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿಯ ತಂದೆ ಮಹೇಶ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರಿನ ಪ್ರಕಾರ, ಶಾಲಾ ಸಿಬ್ಬಂದಿ ವಿದ್ಯಾರ್ಥಿಯ ಮೇಲೆ ದೈಹಿಕ ಹಲ್ಲೆ ನಡೆಸಿ ಮಾನಸಿಕ ಕಿರುಕುಳ ನೀಡಿದ್ದು, ಇದರಿಂದ ಮನನೊಂದ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಜ್ಞಾನಭಾರತಿ ಪೊಲೀಸರು ಹೊಸ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಸೆಕ್ಷನ್‌ಗಳು ಹಾಗೂ ಬಾಲಾಪರಾಧಿ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *