Breaking News

ಎಂಟನೇ ತರಗತಿ ಬಾಲಕಿ ಗರ್ಭಿಣಿ, ಆರೋಪಿಯ ಬಂಧನ

ಚಿಕ್ಕಬಳ್ಳಾಪುರ: ೧೩ ವರ್ಷದ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ವ್ಯಕ್ತಿಯನ್ನು ಬಂಧಿಸಿ, ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಶಿಡ್ಲಘಟ್ಟ ತಾಲೂಕಿನ ಚರಣ್‌ (೨೫) ಎಂಬುದಾಗಿ ಗುರುತಿಸಲಾಗಿದೆ. ೮ ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯು ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಪಾಲಕರು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ತಪಾಸಣೆ ಕೈಗೊಂಡ ವೈದ್ಯರಿಗೆ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ತಕ್ಷಣ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದರಿಂದ ತನಿಖೆ ಕೈಗೊಂಡ ಪೊಲೀಸರು ಚರಣ್‌ ಎಂಬುವವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿ ಹಾಗೂ ಆರೋಪಿಯು ಒಂದೇ ಸಮುದಾಯಕ್ಕೆ ಸೇರಿದವರು. ಇದರ ನಡುವೆ ಬಾಲಕಿಯನ್ನು ಬೆದರಿಸಿ, ಅತ್ಯಾಚಾರವೆಸಗಿದ್ದಾನೆ. ಅಮಾಯಕಿ ಸಂತ್ರಸ್ಥೆ ನೋವಿನಲ್ಲಿ ಸುಮ್ಮನಿದ್ದಳು ಎನ್ನುವುದು ತಿಳಿದು ಬಂದಿದೆ. ಪೊಲೀಸರು ವೈದ್ಯಕೀಯ ವರದಿ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *