Breaking News

ಅಣ್ಣನ ಲವ್ ರಿಜೆಕ್ಟ್​ ಮಾಡಿದ್ದಕ್ಕೆ ಯುವತಿಯನ್ನೇ ಕೊಂದ ತಮ್ಮ; ನಡುರಸ್ತೆಯಲ್ಲೇ ಸಹೋದರರ ಅಟ್ಯಾಕ್

ಬೆಂಗಳೂರು ಹೆಚ್‌ಎಎಲ್‌ ರಸ್ತೆಯ ಕೋಡಿಹಳ್ಳಿಯಲ್ಲಿ ನಡೆದ ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾ ವಿದ್ಯಾರ್ಥಿನಿ ಅಮೃತಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜುಲೈ 13ರಂದು ನಡೆದ ದಾಳಿಯ ಬಳಿಕ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಜುಲೈ 15ರಂದು ಕೊನೆಯುಸಿರೆಳೆದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಮೃತಾ ಮತ್ತು ಧನುಷ್ ನಡುವೆ ಪ್ರೀತಿಯ ಸಂಬಂಧವಿತ್ತು. ಆದರೆ ಧನುಷ್ ಈಗಾಗಲೇ ಮದುವೆಯಾಗಿ ವಿಚ್ಛೇದನ ಪಡೆದಿದ್ದು, ಒಂದು ಮಗು ಇರುವ ವಿಚಾರವನ್ನು ಮುಚ್ಚಿಟ್ಟಿದ್ದಾನೆ ಎನ್ನಲಾಗಿದೆ. ಈ ಸಂಗತಿ ತಿಳಿದ ಬಳಿಕ ಅಮೃತಾ ಸಂಬಂಧದಿಂದ ದೂರವಾಗಿದ್ದರು. ಇದರಿಂದ ಅಸಮಾಧಾನಗೊಂಡ ಧನುಷ್ ಹಾಗೂ ಆತನ ಸಹೋದರ ಸೂರ್ಯ ಯುವತಿಯ ಮನೆ ಬಳಿ ಗಲಾಟೆ ನಡೆಸಿದ್ದು, ಈ ವೇಳೆ ಸೂರ್ಯ ಚಾಕುವಿನಿಂದ ಅಮೃತಾಳ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಧನುಷ್ ಮತ್ತು ಸೂರ್ಯ ವಿರುದ್ಧ ಜೀವನಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *