Breaking News

ಹಾಡಹಗಲೇ ಖಾಸಗಿ ಬಸ್ ಕಂಡಕ್ಟರ್‌ಗಳ ಮಾರಾಮಾರಿ- ಪ್ರಯಾಣಿಕರ ಎದುರೇ ಕಬ್ಬಿಣದ ರಾಡ್‌ ಹಿಡಿದು ಹೊಡೆದಾಟ!

ಮಂಗಳೂರು ಸಮೀಪದ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳ ಟೈಮಿಂಗ್ ವಿಚಾರವಾಗಿ ಇಬ್ಬರು ಕಂಡಕ್ಟರ್‌ಗಳ ನಡುವೆ ಭೀಕರ ಮಾರಾಮಾರಿ ನಡೆದಿದೆ. ಮಂಗಳೂರು–ಉಪ್ಪಿನಂಗಡಿ ಮಾರ್ಗದಲ್ಲಿ ಸಂಚರಿಸುವ ‘ಅರಫಾ’ ಬಸ್‌ನ ಕಂಡಕ್ಟರ್ ನೌಶಾದ್ ಹಾಗೂ ‘ಲಕ್ಷ್ಮೀ’ ಬಸ್‌ನ ಕಂಡಕ್ಟರ್ ಖಲಂದರ್ (ಶಾಹೀದ್) ನಡುವೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ. ಜಗಳ ತಾರಕಕ್ಕೇರುತ್ತಿದ್ದಂತೆ, ನೌಶಾದ್ ಕಬ್ಬಿಣದ ರಾಡ್ ಹಿಡಿದು ಬಸ್‌ನೊಳಗೆ ನುಗ್ಗಿ ಖಲಂದರ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ಖಲಂದರ್ ಕೂಡ ಹಲ್ಲೆ ನಡೆಸಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರ ಎದುರೇ ನಡೆದ ಗಲಾಟೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆಯಲ್ಲಿ ಇಬ್ಬರು ಕಂಡಕ್ಟರ್‌ಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದಡಿ ಉಪ್ಪಿನಂಗಡಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *