ಧಾರವಾಡದಲ್ಲಿ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಡಾ. ಪ್ರಿಯಾಂಕಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನೇ ಪತಿಯನ್ನು ಚಾಕುವಿನಿಂದ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರಿಗೂ ಇದು ಎರಡನೇ ಮದುವೆಯಾಗಿದ್ದು, ಸುಮಾರು 9 ವರ್ಷಗಳ ಹಿಂದೆ ಮದುವೆಯಾಗಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ, ಪತಿ ಬೇರೊಬ್ಬರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದಿಂದ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಆಸ್ಪತ್ರೆಯಿಂದ ಮನೆಗೆ ಬಂದಿದ್ದ ಡಾ. ಕಿರಣ್ ಬೆಡ್‌ರೂಮ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಪ್ರಿಯಾಂಕಾ ಚಾಕುವಿನಿಂದ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ವಿವಿಧ ಆಯಾಮಗಳಿಂದ ತನಿಖೆ ಮುಂದುವರಿದಿದೆ. ಘಟನೆಯ ಬಳಿಕ ಪ್ರಿಯಾಂಕಾ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಸ್ತುತ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹತ್ಯೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿಸಿದ್ದಾರೆ. ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಅವು ಆರೋಪಗಳಾಗಿಯೇ ಪರಿಗಣಿಸಲಾಗುತ್ತವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

