ದಾವಣಗೆರೆ: ಜಿಲ್ಲೆಯ ಮಲೆಬೆನ್ನೂರಿನಲ್ಲಿ ಕಾಲೇಜಿನ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿ ಮಲ್ಲಿಕಾರ್ಜುನ ವಿರುದ್ಧ POCSO ಕಾಯ್ದೆಯಡಿ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರಿನ ಪ್ರಕಾರ, ಉಪನ್ಯಾಸಕ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಅನುಚಿತವಾಗಿ ಸ್ಪರ್ಶಿಸುವುದು ಹಾಗೂ ಲೈಂಗಿಕ ಉದ್ದೇಶದ ಮಾತುಗಳ ಮೂಲಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇತರ ವಿದ್ಯಾರ್ಥಿನಿಯರ ಮೇಲೆಯೂ ಇದೇ ರೀತಿಯ ವರ್ತನೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಇಲಾಖಾ ವಿಚಾರಣೆ ಪೂರ್ಣಗೊಳ್ಳುವವರೆಗೆ ಉಪನ್ಯಾಸಕನನ್ನು ಅಮಾನತುಗೊಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

