ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ಲಾವಣ್ಯ (23) ಎಂಬ ಯುವತಿ ಮೇಲೆ ಯುವಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಲಾವಣ್ಯ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಹಲ್ಲೆಯ ದೃಶ್ಯ ಅಲ್ಲಿದ್ದವರಲ್ಲಿ ಆತಂಕ ಮೂಡಿಸಿದೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

