Breaking News

ಬೆಂಗಳೂರಿನ ಮೆಟ್ರೋ ನಿಲ್ದಾಣದ ಬಳಿ ಅನುಮಾನಾಸ್ಪದ ಘಟನೆ; ಸ್ಪ್ರೇ ಮಾಡಿ ಅನಾಮಿಕ ಪರಾರಿ!

ಬೆಂಗಳೂರು ಇಂದಿರಾನಗರ ಮೆಟ್ರೋ ನಿಲ್ದಾಣದ ಬಳಿ ಇಂದು ಸಂಜೆ ಅಪರಿಚಿತ ವ್ಯಕ್ತಿಯೊಬ್ಬ ನಿಗೂಢ ವಸ್ತುವನ್ನು ಸ್ಪ್ರೇ ಮಾಡಿ ಪರಾರಿಯಾಗಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಸ್ಪ್ರೇ ಬಳಿಕ ತೀವ್ರ ವಾಸನೆ ಹರಡಿದ ಪರಿಣಾಮ ಹಲವರು ಮೂಗು ಮುಚ್ಚಿಕೊಂಡು ಸ್ಥಳದಿಂದ ದೂರ ಸರಿದಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಬಿಎಂಆರ್‌ಸಿಎಲ್ ಸುರಕ್ಷತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಸ್ಪ್ರೇ ಮಾಡಿದ ವಸ್ತು ಏನು ಹಾಗೂ ಕೃತ್ಯದ ಉದ್ದೇಶ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *