Breaking News

ಘೋರ ದುರಂತ.. ಓಮಿನಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವು!

ತುಮಕೂರು ತಾಲೂಕಿನ ಹೊನ್ನುಡಿಕೆ ಸಮೀಪ ಓಮಿನಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಿ.ಎಸ್. ಪಾಳ್ಯ ಗ್ರಾಮದ ಕಮರ್ ಉನ್ನಿಸ್ (51) ಹಾಗೂ ಸೈಯದ್ ತಬ್ರೆಷ್ ಪಾಷಾ (27) ಮೃತರು. ಜಮೀನಿನ ಪೌತಿ ಖಾತೆ ಕೆಲಸಕ್ಕಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಓಮಿನಿ ಕಾರು ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಹೆಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *