Breaking News

ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ…ತಂದೆ-ಮಗನ ಬಂಧನ

ಕುಂದಾಪುರ ತಾಲೂಕಿನ ಗುಲ್ವಾಡಿಯಲ್ಲಿ ಸರ್ಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಆಡಳಿತ ಅಧಿಕಾರಿಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಂದೆ-ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ವಾಡಿ ನಿವಾಸಿಗಳಾದ ಪಳ್ಳಿ ಸುಲೇಮಾನ್ ಮತ್ತು ಶಫಿ ಬಂಧಿತರು. ಗ್ರಾಮ ಆಡಳಿತ ಅಧಿಕಾರಿ ಪ್ರಕಾಶ್ ನಾಯ್ಕ್ ಅವರಿಗೆ ‘SIR’ ಫಾರ್ಮ್ ನೀಡುವ ವಿಚಾರದಲ್ಲಿ ಆರೋಪಿಗಳು ಜಗಳವಾಡಿ, ಜಾತಿ ನಿಂದನೆ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಕುಂದಾಪುರ ಗ್ರಾಮಾಂತರ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *