Breaking News

ಗಾಂಜಾ ಮಾರಾಟ ಮಾಡ್ತಿದ್ದ ಹೋಟೆಲ್ ಕಾರ್ಮಿಕ ಅರೆಸ್ಟ್

ಕೋಲಾರದಲ್ಲಿ ಎರಡೂವರೆ ಲಕ್ಷ ರೂಪಾಯಿ ಮೌಲ್ಯದ 4.3 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಉತ್ತರಪ್ರದೇಶ ಮೂಲದ ಬೋಲನಾಥ್ ಪಾಲ್(43) ಎಂಬುವನನ್ನು ಬಂಧಿಸಲಾಗಿದೆ. ಕೋಲಾರದ ಎಪಿಎಂಸಿ ಬಳಿ ಆರೋಪಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೋಲಾರ ನಗರ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ನರಸಾಪುರ ಬಳಿ ಹೋಟೆಲ್ ವೊಂದರಲ್ಲಿ ಆರೋಪಿ ಕೆಲಸ ಮಾಡುತ್ತಿದ್ದ. ಜೊತೆಗೆ ಗಾಂಜಾ ಕೂಡ ಮಾರಾಟ ಮಾಡುತ್ತಿದ್ದ. ಆರೋಪಿ ಬೋಲನಾಥ್ ಪಾಲ್ ನನ್ನು ಬಂಧಿಸಲಾಗಿದೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *