ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಡೆಂಜದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಕಲಿ 500 ರೂ. ನೋಟು ಮುದ್ರಣ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿ 7 ಮಂದಿಯನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಪ್ರಿಂಟರ್, ಕಂಪ್ಯೂಟರ್, ಕಾಗದ ಕತ್ತರಿಸುವ ಯಂತ್ರ ಸೇರಿದಂತೆ ಹಲವು ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ವಿಶೇಷ ಕಾಗದ ಬಳಸಿ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ತಯಾರಿಸುತ್ತಿದ್ದರು. ದಾಳಿಯ ವೇಳೆ ಮುದ್ರಿಸಿದ ನೋಟುಗಳು, ನೋಟುಗಳ ಶೀಟ್‌ಗಳು, ನಕಲಿ ಸೀಲ್ ಹಾಗೂ ಆರ್‌ಬಿಐ ಭದ್ರತಾ ದಾರವನ್ನು ಹೋಲುವ ಸಾಮಗ್ರಿಗಳೂ ಪತ್ತೆಯಾಗಿವೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 178(1) ಮತ್ತು 181 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಜಾಲದ ಹಿಂದೆ ಇನ್ನಾರಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

