Breaking News

ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಎರಡನೇ ಬಾರಿಗೆ ಗರ್ಭಿಣಿಯಾದ 15 ವರ್ಷದ ಬಾಲೆ

ಹುಬ್ಬಳ್ಳಿಯ ಉಣಕಲ್ ಪ್ರದೇಶದಲ್ಲಿ 15 ವರ್ಷ 6 ತಿಂಗಳ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎನ್ನಲಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಒಮ್ಮೆ ಮಗುವಿಗೆ ಜನ್ಮ ನೀಡಿದ್ದ ಬಾಲಕಿ ಇದೀಗ ಎರಡನೇ ಬಾರಿಗೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿ ಮತ್ತೆ ಗರ್ಭಿಣಿಯಾಗಿರುವ ವಿಚಾರವನ್ನು ಮುಚ್ಚಿಟ್ಟ ಆರೋಪದಡಿ ಪೋಷಕರ ವಿರುದ್ಧವೂ ಕೇಸ್ ದಾಖಲಿಸಲಾಗಿದೆ. ಮಗುವಿನ ಮಾರಾಟದ ಆರೋಪವೂ ತನಿಖೆಯಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣ ತನಿಖೆಯ ಹಂತದಲ್ಲಿದ್ದು, ನ್ಯಾಯಾಲಯದ ಅಂತಿಮ ತೀರ್ಪಿನವರೆಗೆ ಆರೋಪಿಗಳನ್ನು ಅಪರಾಧಿಗಳೆಂದು ಪರಿಗಣಿಸಲಾಗುವುದಿಲ್ಲ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *