Breaking News

ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ!

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆಂಪಲನಾಥ ಗ್ರಾಮದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಕೊಲೆ ಮಾಡಿ, ಶವವನ್ನು ತೋಟದಲ್ಲಿ ಹೂತುಹಾಕಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಸಾತನೂರು ಹೋಬಳಿಯ ಕುರುಬಳ್ಳಿ ಗ್ರಾಮದ ಪ್ರಾರ್ಥನಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಪ್ರಾರ್ಥನಾ ಮತ್ತು ಸುರೇಶ್ ನಡುವೆ ಪ್ರೀತಿಯಿದ್ದು, ಬಾಲಕಿ ಮತ್ತೊಬ್ಬ ಯುವಕನಿಗೆ ಮೊಬೈಲ್‌ನಲ್ಲಿ ಸಂದೇಶ ಕಳುಹಿಸುತ್ತಿದ್ದಾಳೆ ಎಂಬ ಅನುಮಾನದಿಂದ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗಿದೆ. ಆಕ್ರೋಶಗೊಂಡ ಸುರೇಶ್ ನಾಡಬಂದೂಕಿನಿಂದ ಗುಂಡು ಹಾರಿಸಿದ್ದು, ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಆರೋಪಿ ಶವವನ್ನು ತೋಟದಲ್ಲೇ ಹೂತುಹಾಕಿದ್ದಾನೆ. ಬಾಲಕಿ ನಾಪತ್ತೆ ಪ್ರಕರಣದ ತನಿಖೆ ವೇಳೆ ಸತ್ಯ ಬಯಲಾಗಿದ್ದು, ಕೋಡಿಹಳ್ಳಿ ಪೊಲೀಸರು ಸುರೇಶ್‌ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *