ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ವಿರುದ್ಧ ಬಿಗಿ ಕಾರ್ಯಾಚರಣೆ ನಡೆಸಿದ್ದು, ಕಲಬುರಗಿ ಜಿಲ್ಲಾ ನ್ಯಾಯಾಲಯದ ಎಪಿಪಿ ಸಂತೋಷ್ ಕುಮಾರ್ ಲೋಖಂಡೆ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನ್ಯಾಯಾಲಯದ ಆವರಣದಲ್ಲೇ ಅವರನ್ನು ಬಂಧಿಸಲಾಗಿದೆ. ಇನ್ನೊಂದೆಡೆ, ಪ್ರವಾಸೋದ್ಯಮ ಇಲಾಖೆಯ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಹಿರಿಯೂರು ಬಳಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 48 ಲಕ್ಷ ರೂ. ಕಾಮಗಾರಿ ತನಿಖೆ ನಡೆಸದಿರಲು 10 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ. ಅದೇ ವೇಳೆ, ಇ-ಖಾತೆ, ಹಕ್ಕುಪತ್ರ ವರ್ಗಾವಣೆ, ಇ-ಸ್ವತ್ತು ಹಾಗೂ ಕಟ್ಟಡ ಪರವಾನಿಗೆಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಶಿರಾ ನಗರಸಭೆ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

