Breaking News

ಕೌಟುಂಬಿಕ ಕಲಹ: ಇಬ್ಬರು ಸಹೋದರರ ಹತ್ಯೆ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಕ್ಷುಲ್ಲಕ ಜಗಳ ಇಬ್ಬರು ಸಹೋದರರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38) ಮೃತರು. ಸಹೋದರರು ಮತ್ತು ಸಂಬಂಧಿಕರ ನಡುವೆ ಆರಂಭವಾದ ವಾಗ್ವಾದ ತೀವ್ರಗೊಂಡು, ಸುಮಾರು ಆರು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕಾಗಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *