Breaking News

ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದ ಯುವತಿ ಬರ್ಬರ ಹತ್ಯೆ

ಬೆಂಗಳೂರು ನಗರದ ಕೋಡಿಹಳ್ಳಿಯಲ್ಲಿ ಪ್ರೀತಿಸಲು ನಿರಾಕರಿಸಿದ್ದ 24 ವರ್ಷದ ಕಾನೂನು ವಿದ್ಯಾರ್ಥಿನಿ ಅಮೃತಾಳನ್ನು ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಧನುಷ್ ಹಾಗೂ ಆತನ ಸಹೋದರ ಸೂರ್ಯರನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ವಿವಾಹಿತನಾಗಿರುವ ಧನುಷ್ ತನ್ನ ವೈವಾಹಿಕ ಜೀವನದ ವಿಚಾರವನ್ನು ಮುಚ್ಚಿಟ್ಟಿದ್ದ. ಸತ್ಯ ತಿಳಿದ ಬಳಿಕ ಅಮೃತಾ ಆತನಿಂದ ದೂರವಾಗಿದ್ದು, ಇದರಿಂದ ಉಂಟಾದ ದ್ವೇಷವೇ ಹತ್ಯೆಗೆ ಕಾರಣವಾಗಿದೆ. ಜುಲೈ 13ರಂದು ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಮೃತಾ ಚಿಕಿತ್ಸೆ ಫಲಕಾರಿಯಾಗದೆ ಜುಲೈ 15ರಂದು ಮೃತಪಟ್ಟಿದ್ದಾಳೆ. ಇದೇ ವೇಳೆ, ಚೀಟಿ ಹಣದ ವ್ಯವಹಾರಕ್ಕೂ ಆರೋಪಿಗಳು ಅಮೃತಾಳ ತಾಯಿ ಹಾಗೂ ಮಗಳ ವಿರುದ್ಧ ದ್ವೇಷ ಹೊಂದಿದ್ದು, ಇಬ್ಬರನ್ನೂ ಹತ್ಯೆ ಮಾಡುವ ಸಂಚು ರೂಪಿಸಿದ್ದರೆಂಬ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *