ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕಬುದನೂರ ಗ್ರಾಮದ ಸಮೀಪದ ಲಕ್ಷ್ಮೀದೇವರ ಗುಡಿಯಲ್ಲಿ ಮೊಬೈಲ್ ವಾಪಸ್ ನೀಡುವ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಪಕೀರಪ್ಪ ಮಲ್ಲಪ್ಪ ಪಿಡ್ಡೆನ್ನವರ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರೋಪಿ ಮಲ್ಲಿಕಾರ್ಜುನ (25) ತನ್ನ ಮೊಬೈಲ್ ವಾಪಸ್ ಕೇಳಿದಾಗ, ಪಕೀರಪ್ಪ “ರಾತ್ರಿ ಕೊಡುತ್ತೇನೆ” ಎಂದಿದ್ದರಿಂದ ಕೋಪಗೊಂಡು ಗುಡಿಯಲ್ಲಿದ್ದ ಭಾರವಾದ ಕಲ್ಲನ್ನು ತಲೆಯ ಮೇಲೆ ಎಸೆದಿದ್ದಾನೆ. ತೀವ್ರ ಗಾಯಗೊಂಡ ಪಕೀರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ಮುರಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಮಲ್ಲಿಕಾರ್ಜುನ ಸಿದ್ದಪ್ಪ ಪೂಜೇರಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

