ಮೈಸೂರಿನ ಹೊರವಲಯದಲ್ಲಿ ಗುತ್ತಿಗೆದಾರ ರಾಮು ಅವರನ್ನು ನಾಲ್ವರ ತಂಡ ಅಪಹರಿಸಿ, ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿ ರಾತ್ರಿಯಿಡೀ ಕಾರಿನಲ್ಲಿ ಸುತ್ತಾಡಿಸಿ 16 ಲಕ್ಷ ರೂ. ನಗದು ಹಾಗೂ ಸುಮಾರು 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು “ನಿನ್ನನ್ನು ಕೊಲ್ಲಲು 9 ಲಕ್ಷಕ್ಕೆ ಸುಫಾರಿ ನೀಡಲಾಗಿದೆ. ಬದುಕಬೇಕಾದರೆ 40 ಲಕ್ಷ ಕೊಡು” ಎಂದು ಬೆದರಿಕೆ ಹಾಕಿದ್ದಾರೆ. ಬಳಿಕ ರಾಮು ಅವರಿಂದ ಹೆಂಡತಿಗೆ ಕರೆ ಮಾಡಿಸಿ, ಬಾಮೈದನ ಮೂಲಕ 16 ಲಕ್ಷ ರೂ. ಹಣವನ್ನು ನಂದಗುಂದ ಸೇತುವೆ ಬಳಿ ಪಡೆದುಕೊಂಡಿದ್ದಾರೆ. ನಂತರ ರಾಮು ಅವರನ್ನು ಅಪರಿಚಿತ ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದು, ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

