Breaking News

ನೆಲಮಂಗಲದಲ್ಲಿ ನೈತಿಕ ಪೊಲೀಸ್ ಗಿರಿ! ಹಿಂದೂ ಯುವಕನ ಮೇಲೆ ಹಲ್ಲೆ; ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಮುಸ್ಲಿಂ ಯುವತಿ ಕೌಸರ್ ಬಾನು ಜೊತೆ ನಡೆದುಕೊಂಡು ಹೋಗುತ್ತಿದ್ದ ಯಶವಂತ್ ಎಂಬ ಹಿಂದೂ ಯುವಕನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಹರೀಕ್ ಪಾಷಾ, ಸೋಹೇಲ್ ಪಾಷಾ ಹಾಗೂ ಸಯ್ಯದ್ ಕರೀಂ ಎಂಬವರು ಯುವಕನನ್ನು ತಡೆದು ನಿಂದಿಸಿ ಹಲ್ಲೆ ನಡೆಸಿದ್ದು, ಅದರ ವಿಡಿಯೋವನ್ನು ಚಿತ್ರೀಕರಿಸಿ ವಾಟ್ಸಾಪ್ ಗುಂಪುಗಳಲ್ಲಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಮನನೊಂದ ಕೌಸರ್ ಬಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ಸಂಬಂಧ ಯುವತಿ ಡಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದೇ ವೇಳೆ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಉದಯ್ (20) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೂ ಬೆಳಕಿಗೆ ಬಂದಿದೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *