Breaking News

ಅಣ್ಣಿಗೇರಿಯಲ್ಲಿ ಗೀಸರ್ ಸಿಲಿಂಡರ್ ಸ್ಫೋಟ: ಮೂವರಿಗೆ ಗಾಯ

ಹುಬ್ಬಳ್ಳಿ ಸಮೀಪದ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಉದಯನಗರದಲ್ಲಿ ಗೀಸರ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದಾರೆ. ಬೆಳಗಿನ ಜಾವ ನಡೆದ ಸ್ಫೋಟದಿಂದ ಮನೆಯಲ್ಲಿದ್ದ ಸಾಯಿರಾ ಬಾನು (54), ಅಬ್ಬಾಸ್ ಅಲಿ (29) ಹಾಗೂ ಹಸನ್ ಸಾಬ್ (26) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೊದಲು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ವೇಳೆ ಮನೆಯ ಮಾಲೀಕ ಅಲ್ಲಾ ಬಕ್ಷ್ ನಮಾಝ್‌ಗೆ ತೆರಳಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟುಹೋಗಿದ್ದು, ಮನೆಗೂ ಹಾನಿಯಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *