Breaking News

ತಂದೆ ಕೊಂದ ಪಾಪಿ ಮಗನಿಗೆ ಜೀವಾವಧಿ ಶಿಕ್ಷೆ: ಕ್ಷುಲ್ಲಕ ಕಾರಣಕ್ಕೆ ಕಬ್ಬಿಣದ ರಾಡ್ʼನಿಂದ ಹೊಡೆದು ಹತ್ಯೆ!

ಬೆಂಗಳೂರು ರಾಜಾಜಿನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿದ ಮಗ ರಘುಗೆ ಸಿಸಿಹೆಚ್-68 ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದೆ. ಕಳೆದ ಜನವರಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 103 ಅಡಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳು ಹಾಗೂ ವಾದ-ಪ್ರತಿವಾದಗಳನ್ನು ಪರಿಗಣಿಸಿದ ನ್ಯಾಯಾಧೀಶ ಕೆ.ಎಸ್. ಭರತ್ಕುಮಾರ್ ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *