ಮೂಡುಬಿದಿರೆ: ಬಸ್ ನಿಲ್ದಾಣದ ಮೊಬೈಲ್ ಅಂಗಡಿಗೆ ಶನಿವಾರ ಮಧ್ಯಾಹ್ನ ತಲವಾರು ಹಿಡಿದು ನುಗ್ಗಿದ ಯುವಕ ಗಲಾಟೆ ನಡೆಸಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ್ದಾನೆ. ಗ್ರಾಹಕರು ಅಂಗಡಿಯಲ್ಲಿದ್ದ ವೇಳೆ ತಲವಾರು ಝಳಪಿಸಿದ ಯುವಕನನ್ನು ಸ್ಥಳೀಯ ಯುವಕರು ಸಮಯಪ್ರಜ್ಞೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರಂಭದಲ್ಲಿ ಪೆರಿಂಜೆಯವನು ಎಂದು ಹೇಳಿದ್ದ ಆತ, ಬಳಿಕ ಕೋಟೆಬಾಗಿಲಿನ ಸಂದೇಶ್ ಎಂಬಾತ ತಲವಾರು ನೀಡಿದ್ದಾನೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ. ತಲವಾರು ಹಿಡಿದು ಅಂಗಡಿಗೆ ನುಗ್ಗಿ ಗಲಾಟೆ ನಡೆಸಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಕುರಿತು ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
