ವಿಜಯಪುರ: ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಜು.18) ನಡೆದಿದೆ. ತಿಡಗುಂದಿಯ ದೇವದಾಸ್ ಜಾಧವ್ ಎಂಬುವವರಿಗೆ ಸೇರಿದ ಸ್ಕಾರ್ಪಿಯೋ ಕಾರು ಇದಾಗಿದ್ದು, ಮಾನಸ ಗಂಗೋತ್ರಿ ಶಾಲೆ ಎದುರು ನಿಲ್ಲಿಸಲಾಗಿತ್ತು. ಕಾರಿಗೆ ಬೆಂಕಿ ಬಿದ್ದ ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಷ್ಟು ಹೊತ್ತಿಗಾಗಲೇ ಕಾರು ಸುಟ್ಟು ಭಸ್ಮವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
