ಕಲಬುರಗಿಯಲ್ಲಿ 12 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಮೂವರು ಸ್ನೇಹಿತರಿಗೆ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಮುಖ ಆರೋಪಿ ನಾಗೇಶ ಅಲಿಯಾಸ್ ಬಾಬು ರಾಠೋಡಗೆ 25 ವರ್ಷ ಜೈಲು ಶಿಕ್ಷೆ ಮತ್ತು ₹45 ಸಾವಿರ ದಂಡ ವಿಧಿಸಲಾಗಿದೆ. ಆರೋಪಿ ನಾಗೇಶ ಪ್ರೀತಿಸುವುದಾಗಿ ನಂಬಿಸಿ ಬಾಲಕಿಯ ಮೇಲೆ ಮೂರು ಬಾರಿ ಅತ್ಯಾಚಾರ ಎಸಗಿದ್ದ. ಬಳಿಕ ಸ್ನೇಹಿತ ಶಿವರಾಜನೂ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದರೆ, ಮತ್ತೊಬ್ಬ ಆರೋಪಿ ಮಲ್ಲಿಕಾರ್ಜುನ ಲೈಂಗಿಕ ದೌರ್ಜನ್ಯದ ಉದ್ದೇಶದಿಂದ ಬಾಲಕಿಯನ್ನು ಅಪಹರಿಸಿದ್ದ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮೂವರಿಗೂ ಶಿಕ್ಷೆ ವಿಧಿಸಿದ್ದು, ನೊಂದ ಬಾಲಕಿಗೆ ಒಟ್ಟು ₹6 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

