ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 31 ವರ್ಷದ ಮೈಮೋನಿಸ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಗಂಡ ಜುನೈದ್ ಅವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮದುವೆ ವೇಳೆ 45 ಗ್ರಾಂ ಚಿನ್ನ ಹಾಗೂ ಬೈಕ್ ನೀಡಿದ್ದರೂ, ಇನ್ನಷ್ಟು ಚಿನ್ನ ಮತ್ತು ಹಣ ತರುವಂತೆ ಗಂಡ ಹಾಗೂ ಮಾವ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ. ನಿರಂತರ ಮಾನಸಿಕ ಕಿರುಕುಳ ಮತ್ತು ಅವಮಾನದಿಂದ ಮನನೊಂದ ಮೈಮೋನಿಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಾವ ನಜೀರ್ ಅಹಮದ್ ಸೇರಿದಂತೆ ಇತರರ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

