ಬೆಂಗಳೂರಿನಲ್ಲಿ ಬುದ್ಧಿವಾದ ಹೇಳಿದ ತಂದೆಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆಗೈದ ಪುತ್ರ ರಘುಗೆ 68ನೇ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ. ಮದ್ಯದ ಚಟಕ್ಕೆ ಹಣ ನೀಡುವಂತೆ ಪೋಷಕರನ್ನು ಪೀಡಿಸುತ್ತಿದ್ದ ರಘುಗೆ, ಕೆಲಸಕ್ಕೆ ಹೋಗಿ ದುಡಿಯುವಂತೆ ತಂದೆ ರಾಮಚಂದ್ರ ಬುದ್ಧಿವಾದ ಹೇಳಿದ್ದರು. ಇದರಿಂದ ಕೋಪಗೊಂಡ ಆರೋಪಿ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳ ಆಧಾರದ ಮೇಲೆ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

