Breaking News

ಸೈಬರ್​​ ವಂಚಕರ ಮಾತು ನಂಬಿ 22 ಲಕ್ಷ ರೂಪಾಯಿ ಕಳೆದುಕೊಂಡ ನಿವೃತ್ತ ಬ್ಯಾಂಕ್ ನೌಕರ

ಉಡುಪಿಯಲ್ಲಿ ಸೈಬರ್ ವಂಚಕರು ಪೊಲೀಸ್, ಇಡಿ ಹಾಗೂ ಸಿಬಿಐ ಅಧಿಕಾರಿಗಳೆಂದು ನಂಬಿಸಿ 76 ವರ್ಷದ ನಿವೃತ್ತ ಬ್ಯಾಂಕ್ ನೌಕರನಿಂದ ₹22 ಲಕ್ಷ ವಂಚಿಸಿದ್ದಾರೆ. ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸಾಪ್ ವಿಡಿಯೋ ಕರೆ ಮಾಡಿ, ಅವರ ಹೆಸರಿನಲ್ಲಿ ಮನಿ ಲಾಂಡರಿಂಗ್ ಪ್ರಕರಣವಿದೆ ಎಂದು ಸುಳ್ಳು ಹೇಳಿ ಭಯ ಹುಟ್ಟಿಸಿದ್ದಾರೆ. ಬಳಿಕ ಹಣ ಪರಿಶೀಲನೆ ಹೆಸರಿನಲ್ಲಿ ಆರ್‌ಟಿಜಿಎಸ್ ಮೂಲಕ ಹಣ ವರ್ಗಾಯಿಸುವಂತೆ ನಂಬಿಸಿದ್ದಾರೆ. ಆರೋಪಿಗಳ ಸೂಚನೆಯಂತೆ ನಿವೃತ್ತ ಬ್ಯಾಂಕ್ ನೌಕರ ₹22 ಲಕ್ಷ ವರ್ಗಾವಣೆ ಮಾಡಿದ್ದು, ಬಳಿಕ ತಾವು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *