Breaking News

ಗುರಾಯಿಸಿದ ಕಾರಣಕ್ಕೆ ನೇಪಾಳ ಮೂಲದ ಯುವಕನ ಕೊಲೆ: ಐವರು ಆರೋಪಿಗಳ ಸೆರೆ

ಬೆಂಗಳೂರಿನ ಎಚ್‌ಎಎಲ್‌ ಠಾಣೆ ವ್ಯಾಪ್ತಿಯ ಚಿನ್ನಪ್ಪನಹಳ್ಳಿಯಲ್ಲಿ ನೇಪಾಳ ಮೂಲದ ಯುವಕ ಗಜೇಂದ್ರ ವಿಶ್ವಕರ್ಮ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 13ರಂದು ವಾಲಿಬಾಲ್ ಆಡುತ್ತಿದ್ದ ವೇಳೆ ಆರೋಪಿಗಳು ಗಜೇಂದ್ರನ ಮೇಲೆ ಹಲ್ಲೆ ನಡೆಸಿದ್ದು, ಬಳಿಕ ರಾತ್ರಿ ಮನೆ ಬಳಿ ಮಾರಕಾಸ್ತ್ರಗಳಿಂದ ಮತ್ತೆ ಹಲ್ಲೆ ನಡೆಸಿದ್ದರು. ತೀವ್ರ ಗಾಯಗೊಂಡ ಗಜೇಂದ್ರ ಚಿಕಿತ್ಸೆ ಫಲಕಾರಿಯಾಗದೆ ಜುಲೈ 15ರಂದು ಮೃತಪಟ್ಟಿದ್ದರು. ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಪರೋಕ್ಷವಾಗಿ ಸಹಕಾರ ನೀಡಿದ ಆರೋಪದಡಿ ಬಂಧಿತರಾಗಿದ್ದು, ಎಚ್‌ಎಎಲ್‌ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *