ಬೆಂಗಳೂರು ಉತ್ತರ ತಾಲೂಕಿನ ತೊರೆನಾಗಸಂದ್ರ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಾಗೂ ವರದಕ್ಷಿಣೆ ಕಿರುಕುಳದಿಂದ ಬೇಸತ್ತ 25 ವರ್ಷದ ಕಾವ್ಯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾವ್ಯ ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನವರಾಗಿದ್ದು, ಮೂರು ವರ್ಷಗಳ ಹಿಂದೆ ನವೀನ್ ಜೊತೆ ವಿವಾಹವಾಗಿದ್ದರು. ವಿವಾಹವಾಗಿ ಮೂರು ವರ್ಷ ಕಳೆದರೂ ಮಕ್ಕಳಾಗದ ಕಾರಣ ಪತಿ ಹಾಗೂ ಕುಟುಂಬಸ್ಥರು ಜಗಳವಾಡುತ್ತಿದ್ದು, ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದ ಕಾವ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾವ್ಯ ಪೋಷಕರ ದೂರಿನ ಮೇರೆಗೆ ಪತಿ ನವೀನ್ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

