ಉಡುಪಿಯ ಶಿವಳ್ಳಿ ಗ್ರಾಮದ ಬುಡ್ನಾರ್‌ನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಹೊಂದಿದ್ದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಎಂ.ಡಿ.ಎಂ.ಎ ಪೌಡರ್, ಎಂ.ಡಿ.ಎಂ.ಎ ಟ್ಯಾಬ್ಲೆಟ್, ಹೈಡ್ರೋ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ವಿಜಯ ಪೂಜಾರಿ (36), ಪಿ.ಎ. ಮುಹಮ್ಮದ್ ಶಮ್ಮಾಸ್ (24) ಹಾಗೂ ಆಕಾಶ್ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಾದಕ ವಸ್ತುಗಳ ಜೊತೆಗೆ ಅವುಗಳ ಸಾಗಾಟಕ್ಕೆ ಬಳಸಿದ ಕಾರು ಮತ್ತು ಇತರ ಸೊತ್ತುಗಳನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿವೈಎಸ್‌ಪಿ ಬೆಳ್ಳಿಯಪ್ಪ ಕೆ.ಯು. ಮಾರ್ಗದರ್ಶನದಲ್ಲಿ ಮಲ್ಪೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

