Breaking News

ಸಾಲ ಕೊಡದ ಬೇಕರಿ ಮಾಲಿಕನ ಮೇಲೆ ಪುಡಿರೌಡಿಗಳಿಂದ ಭೀಕರ ಹಲ್ಲೆ!

ಬೆಂಗಳೂರು ಆರ್.ಟಿ.ನಗರದಲ್ಲಿ ಸಾಲ ನೀಡಲು ನಿರಾಕರಿಸಿದ ಕಾರಣಕ್ಕೆ ಬೇಕರಿ ಮಾಲೀಕರಾದ ಚಂದ್ರಶೇಖರ್ ಶೆಟ್ಟಿ ಮತ್ತು ರೂಪಾ ಶೆಟ್ಟಿ ದಂಪತಿಗಳ ಮೇಲೆ ಪುಡಿ ರೌಡಿಗಳ ತಂಡ ಮಾರಣಾಂತಿಕ ಹಲ್ಲೆ ನಡೆಸಿದೆ. ಅಂಗಡಿಯೊಳಗೆ ನುಗ್ಗಿದ ಆರೋಪಿಗಳು ಸಾಮಗ್ರಿಗಳನ್ನು ಧ್ವಂಸಗೊಳಿಸಿ ದಂಪತಿಗಳಿಗೂ ಹಲ್ಲೆ ಮಾಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಬೇಕರಿ ಕಾಂಡಿಮೆಂಟ್ಸ್ ಮತ್ತು ಸಣ್ಣ ಉದ್ದಿಮೆದಾರರ ಒಕ್ಕೂಟ ಸಂತ್ರಸ್ತರ ಪರವಾಗಿ ನಿಂತಿದ್ದು, ದಂಪತಿಗಳೊಂದಿಗೆ ಆರ್.ಟಿ.ನಗರ ಪೊಲೀಸ್ ಠಾಣೆಗೆ ತೆರಳಿ ಅಧಿಕೃತ ದೂರು ದಾಖಲಿಸಿದೆ. ಪೊಲೀಸರು ತ್ವರಿತವಾಗಿ ಎಫ್‌ಐಆರ್ ದಾಖಲಿಸಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *