ಬೆಂಗಳೂರು: ಮದ್ಯದ ಅಮಲಿನಲ್ಲಿ ಬಸ್‌ಗೆ ಹತ್ತಿದ ಮಹಿಳೆಯೊಬ್ಬರು ಸೀಟಿನ ವಿಚಾರವಾಗಿ ಸಹ ಪ್ರಯಾಣಿಕರೊಂದಿಗೆ ಜಗಳವಾಡಿ, ಸಮಾಧಾನಪಡಿಸಲು ಬಂದ ಮಹಿಳಾ ಕಂಡಕ್ಟರ್ ಮೇಲೆಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬಳಿಕ ಕಂಡಕ್ಟರ್ ಹಾಗೂ ಕೆಲ ಸಹ ಪ್ರಯಾಣಿಕರು ಮಹಿಳೆಯನ್ನು ತಡೆದು ಹೊಡೆದಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ಮಹಿಳೆ ಬಸ್‌ನಲ್ಲಿ ಗಲಾಟೆ ನಡೆಸಿ ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಕಂಡಕ್ಟರ್ ಮೇಲೆ ಮಹಿಳೆ ಹಲ್ಲೆ ನಡೆಸಿದ ಬಳಿಕ, ಕಂಡಕ್ಟರ್ ಮತ್ತು ಕೆಲ ಸಾರ್ವಜನಿಕರು ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯವನ್ನು ಸಹ ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಮಹಿಳೆಯ ವರ್ತನೆ ಕುರಿತು ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

