Breaking News

ಆಪ್‌ನಲ್ಲಿ ಅಪ್ಸರೆಯರ ಆಸೆ ತೋರಿಸಿ ಹನಿಟ್ರ್ಯಾಪ್‌.. ಆಟೋದಲ್ಲಿ ಕಿಡ್ನ್ಯಾಪ್, ಆಮೇಲೆ ಬೆತ್ತಲೆಗೊಳಿಸಿ ವಿಕೃತಿ..!

ಬೆಂಗಳೂರು: ಲೋಕಾಂಟೊ ಆಪ್‌ನಲ್ಲಿ ಸುಂದರಿಯರ ಫೋಟೋ ಹಾಕಿ ಯುವಕರನ್ನು ಸೆಳೆದು, ಬಳಿಕ ಅಪಹರಿಸಿ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ಸುಲಿಗೆ ಮಾಡುತ್ತಿದ್ದ 11 ಮಂದಿ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತನೊಬ್ಬ ಹೆಚ್‌ಆರ್‌ಬಿಆರ್ ಲೇಔಟ್‌ಗೆ ಹೋದಾಗ, ಇಬ್ಬರು ಮಹಿಳೆಯರ ಮೂಲಕ ಆತನನ್ನು ಆಟೋದಲ್ಲಿ ಕೂರಿಸಿಕೊಂಡು ಗ್ಯಾಂಗ್ ಸದಸ್ಯರು ಅಪಹರಿಸಿ, ಪ್ರಾಣ ಬೆದರಿಕೆ ಹಾಕಿ ಚಿನ್ನದ ಸರ, ಮೊಬೈಲ್ ಹಾಗೂ ನಗದನ್ನು ಕಸಿದುಕೊಂಡಿದ್ದಾರೆ. ಬಳಿಕ ಆತನನ್ನು ಅವಮಾನಿಸಿ ಬಿಟ್ಟು ಹೋಗಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು 11 ಆರೋಪಿಗಳನ್ನು ಬಂಧಿಸಿ, 2 ಆಟೋ, 4 ದ್ವಿಚಕ್ರ ವಾಹನ, 13 ಮೊಬೈಲ್ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರಿದಿದ್ದು, ಅಪರಿಚಿತ ಡೇಟಿಂಗ್ ಆಪ್‌ಗಳ ಆಮಿಷಗಳಿಗೆ ಬಲಿಯಾಗದಂತೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *