Breaking News

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್, ಫೋಟೋಶೂಟ್ ಪೋಸ್ಟ್‌ಗೆ ಬ್ರೇಕ್..? ಡಿಜಿಪಿಗೆ ಶಿಫಾರಸು ಪತ್ರ..

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಬೇಡ..! ಖಾಕಿಯ ಘನತೆ ಉಳಿಸಲು ಕಠಿಣ ನಿಯಮಕ್ಕೆ ಶಿಫಾರಸು…

ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ ರೀಲ್ಸ್, ಫೋಟೋಶೂಟ್, ಪ್ರಿ-ವೆಡ್ಡಿಂಗ್ ಶೂಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಪ್ರವೃತ್ತಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಶಿಫಾರಸು ಪತ್ರ ಬರೆದಿದೆ…

ಪತ್ರದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆ ಸರ್ಕಾರಿ ವಾಹನಗಳು, ಆಯುಧಗಳು ಹಾಗೂ ಪೊಲೀಸ್ ಸಮವಸ್ತ್ರವನ್ನು ಬಳಸಿಕೊಂಡು ರೀಲ್ಸ್ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವುದು ಇಲಾಖೆಯ ಶಿಸ್ತು,..

ಘನತೆ ಮತ್ತು ಭದ್ರತೆಗೆ ಧಕ್ಕೆ ತರುತ್ತಿದೆ ಎಂದು ಉಲ್ಲೇಖಿಸಲಾಗಿದೆ. ಸಮವಸ್ತ್ರದಲ್ಲಿನ ಫೋಟೋಗಳನ್ನು ದುಷ್ಕರ್ಮಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ತಿಳಿಸಲಾಗಿದೆ….

ಆದ್ದರಿಂದ, ಪೊಲೀಸ್ ಸಿಬ್ಬಂದಿ ಸಮವಸ್ತ್ರದಲ್ಲಿ ರೀಲ್ಸ್, ಫೋಟೋ, ವಿಡಿಯೋ, ಡಿಪಿ ಹಾಗೂ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡುವುದನ್ನು ನಿಷೇಧಿಸಬೇಕು. ಈಗಾಗಲೇ ಅಪ್‌ಲೋಡ್ ಮಾಡಿರುವ ಸಮವಸ್ತ್ರದ ಫೋಟೋಗಳು, ಪ್ರಿ-ವೆಡ್ಡಿಂಗ್ ಶೂಟ್ ಹಾಗೂ ರೀಲ್ಸ್‌ಗಳನ್ನು ಅಳಿಸುವಂತೆ ಸೂಚನೆ ನೀಡಬೇಕು ಎಂದು ಶಿಫಾರಸು ಮಾಡಲಾಗಿದೆ….

ಆದರೆ, ಇದು ಸದ್ಯಕ್ಕೆ ಶಿಫಾರಸು ಮಾತ್ರವಾಗಿದ್ದು, ರಾಜ್ಯ ಪೊಲೀಸ್ ಇಲಾಖೆಯಿಂದ ಇನ್ನೂ ಅಧಿಕೃತ ಆದೇಶ ಹೊರಬಿದ್ದಿಲ್ಲ.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *