ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ವಿದ್ಯಾರ್ಥಿನಿಯ ದಾಖಲಾತಿಗೆ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. 7ನೇ ತರಗತಿಗೆ ದಾಖಲಾತಿ ಮಾಡಿಕೊಡಲು ಪೋಷಕರಿಂದ ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅವರು, ಮೊದಲ ಕಂತಿನ ₹10 ಸಾವಿರವನ್ನು ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಆರೋಪಿ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ್ ನೇತೃತ್ವದ ತಂಡ ಹೆಚ್ಚಿನ ತನಿಖೆ ನಡೆಸುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

