Breaking News

ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲವೆಂದು ದೇವಸ್ಥಾನದ ಮುಂಭಾಗದಲ್ಲೇ ಮರಕ್ಕೆ ನೇಣು ಬಿಗಿದುಕೊಂಡ ವ್ಯಕ್ತಿ!

ಬೆಂಗಳೂರು: ಪ್ರೇಯಸಿ ಮಾತನಾಡುತ್ತಿಲ್ಲ ಎಂಬ ಬೇಸರದಿಂದ 41 ವರ್ಷದ ವ್ಯಕ್ತಿಯೊಬ್ಬ ಸಾರ್ವಜನಿಕ ಸ್ಥಳದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಯಾಲಿಕಾವಲ್ ಠಾಣೆ ವ್ಯಾಪ್ತಿಯ ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಡಾರ್ಜಿಲಿಂಗ್ ಮೂಲದ ಸುದೀಪ್ (41) ಎಂದು ಗುರುತಿಸಲಾಗಿದೆ. ದೇವಸ್ಥಾನದ ಮುಂಭಾಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹದ ಬಳಿ ಇದ್ದ ಸೂಟ್‌ಕೇಸ್‌ನಲ್ಲಿ ನಗದು ಹಣ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಪ್ರೇಯಸಿ ಮಾತನಾಡುತ್ತಿಲ್ಲ ಎಂಬ ವಿರಹದಿಂದ ಮನನೊಂದು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಸೂಟ್‌ಕೇಸ್‌ನಲ್ಲಿದ್ದ ಹಣದ ಮೂಲ ಹಾಗೂ ಆತ್ಮಹತ್ಯೆಯ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *