Breaking News

ಕಡಿಮೆ ಬಡ್ಡಿ ಸಾಲದ ಆಸೆಗೆ ಬಿದ್ದು ತಾಳಿ ಅಡವಿಟ್ಟ ಮಹಿಳೆಯರಿಗೆ ಮಕ್ಮಲ್ ಟೋಪಿ!

ವಿಜಯಪುರ: ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ಗ್ರಾಮೀಣ ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಾಲದ ಆಸೆಗೆ ₹50 ಸಾವಿರದಿಂದ ₹1 ಲಕ್ಷದವರೆಗೆ ಮುಂಗಡ ಹಣ ಪಾವತಿಸಿದ ಮಹಿಳೆಯರಲ್ಲಿ ಹಲವರು ತಮ್ಮ ಮಂಗಳಸೂತ್ರ (ತಾಳಿ) ಅಡವಿಟ್ಟು ಹಣ ತಂದಿದ್ದರೂ, ವಂಚಕರು ನಕಲಿ ರಸೀದಿ, ಬಿಲ್ ಹಾಗೂ ಬಾಂಡ್ ಪೇಪರ್‌ಗಳನ್ನು ನೀಡಿ ನಂಬಿಸಿ ಬಳಿಕ ಕಚೇರಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಸಾರ್ವಜನಿಕರಿಂದ ಒಂದು ಕೋಟಿಗೂ ಅಧಿಕ ಹಣ ಸಂಗ್ರಹಿಸಿರುವ ಆರೋಪ ಕೇಳಿಬಂದಿದ್ದು, ಸಾಲವೂ ಸಿಗದೆ, ಕಟ್ಟಿದ ಹಣವೂ ಕೈಗೆ ಸಿಗದೆ ನೂರಾರು ಮಹಿಳೆಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನ್ಯಾಯಕ್ಕಾಗಿ ಸಂತ್ರಸ್ತರು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಎಸ್ಪಿ ಲಕ್ಷ್ಮಣ ನಿಂಬರಗಿ ಅವರು, ಸಂತ್ರಸ್ತರಿಂದ ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಲೆಮರೆಸಿಕೊಂಡಿರುವ ವಂಚಕರ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *