Breaking News

ಬೆಳ್ತಂಗಡಿ| ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯಿಂದ ಉದ್ಯಮಿಗೆ 87 ಲಕ್ಷ ರೂ. ವಂಚನೆ; ಪ್ರಕರಣ ದಾಖಲು

ಬೆಳ್ತಂಗಡಿ: ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳು ಬೆಳ್ತಂಗಡಿಯ ಉದ್ಯಮಿಯಿಂದ ₹87.22 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಯ್ಯೂರು ನಿವಾಸಿ ಉದ್ಯಮಿ ಅನನ್ಯ ಕೃಷ್ಣ (36) ಅವರಿಗೆ 2024ರ ಮೇ ತಿಂಗಳಲ್ಲಿ ಶಿವಮೊಗ್ಗ/ಬೆಂಗಳೂರು ಮೂಲದ ಅನಿಷಾ ಪಾಲನ್ನ (35) ಪರಿಚಯವಾಗಿತ್ತು. ಇನ್‌ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ಇಬ್ಬರೂ ಸಂಪರ್ಕದಲ್ಲಿದ್ದು, ಮದುವೆ ಕುರಿತು ಮಾತುಕತೆ ನಡೆಸುತ್ತಿದ್ದರು. ಇದೇ ವೇಳೆ ವ್ಯವಹಾರದಲ್ಲಿ ಆರ್ಥಿಕ ಸಂಕಷ್ಟವಿದೆ ಎಂದು ಹೇಳಿದ ಯುವತಿ, ತನ್ನ ಹಾಗೂ ಇತರರ ಬ್ಯಾಂಕ್ ಖಾತೆಗಳಿಗೆ, ಗೂಗಲ್ ಪೇ ಮೂಲಕ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದಾಳೆ. ಅಲ್ಲದೆ, ಬೆಂಗಳೂರಿನಲ್ಲಿ ತನ್ನ ಪರವಾಗಿ ಬಂದ ವ್ಯಕ್ತಿಯ ಮೂಲಕವೂ ಲಕ್ಷಾಂತರ ರೂಪಾಯಿ ಪಡೆದಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಒಟ್ಟು ₹87,22,710 ಪಡೆದ ಬಳಿಕ ಯುವತಿ ಮೊಬೈಲ್ ಸಂಪರ್ಕಕ್ಕೂ ಸಿಗದೆ, ಹಣವನ್ನೂ ಹಿಂದಿರುಗಿಸದೆ ವಂಚಿಸಿರುವುದಾಗಿ ದೂರು ನೀಡಲಾಗಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್-2023ರ ಕಲಂ 318(4) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *