ಬೆಳ್ತಂಗಡಿ: 16 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಅವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಬಳಿಕ ತಾಯಿ ನೀಡಿದ ದೂರಿನ ಮೇರೆಗೆ ಜುಲೈ 18ರಂದು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜುಲೈ 19ರಂದು ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು, ಜುಲೈ 20ರಂದು ಮಂಗಳೂರು ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

