ಮಂಗಳೂರು: ಮೊಬೈಲ್‌ನಲ್ಲಿ ಯುವತಿಯೊಂದಿಗೆ ಮಾತನಾಡಿದ್ದ ವಿಚಾರಕ್ಕೆ ಅಣ್ಣನೇ ತಮ್ಮನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನಲ್ಲಿ ನಡೆದಿದೆ. ಮೃತನು ಮಲ್ಲಿಕಾರ್ಜುನ (20) ಆಗಿದ್ದು, ಆರೋಪಿ ಸೋಮನಾಥ (21)ನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 19ರ ರಾತ್ರಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ಸೋಮನಾಥ ಕೊಡಲಿಯಿಂದ ತಲೆ ಹಾಗೂ ಮುಖಕ್ಕೆ ಹಲ್ಲೆ ನಡೆಸಿದ ಪರಿಣಾಮ ಮಲ್ಲಿಕಾರ್ಜುನ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಆರೋಪಿ ಪರಾರಿಯಾಗಿದ್ದ. ಪೊಲೀಸರು ಹುಡುಕಾಟ ನಡೆಸಿ ಸಮೀಪದ ಪೊದೆಯಲ್ಲಿ ಅಡಗಿದ್ದ ಸೋಮನಾಥನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

