Breaking News

ಬಸ್​ ಸ್ಟ್ಯಾಂಡ್​ ಬಳಿ ಯುವತಿ ಕಿಡ್ನ್ಯಾಪ್ ಮಾಡಿ ಸಾಮೂಹಿಕ ಅತ್ಯಾಚಾರ, ಮೈಸೂರಿನಲ್ಲಿ ನೀಚ ಕೃತ್ಯ

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಯುವತಿಯನ್ನು ಅಪಹರಿಸಿ ಚಾಮರಾಜನಗರ ಜಿಲ್ಲೆಯ ಲಾಡ್ಜ್‌ಗೆ ಕರೆದೊಯ್ದು ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ಕಿರಣ್, ಕಿಶೋರ್ ಮತ್ತು ರಿಯಾನ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ, ನಂಜನಗೂಡು ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ 23 ವರ್ಷದ ಸುರೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಮುಂದುವರಿದಿದೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *