Breaking News

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ರಾತ್ರಿಯಿಡೀ ಗ್ಯಾಂಗ್ ರೇಪ್.!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಆಟೋದಲ್ಲಿ ಕರೆದೊಯ್ದ ಆರೋಪಿಗಳು, ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ನವೀನ್, ವೆಂಕಟರಮಣ ಹಾಗೂ ರೇಣುಕಾ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಬಿಎನ್‌ಎಸ್ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *