ನವದೆಹಲಿದಲ್ಲಿ ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ‘ಚಲೋ ಸಂಸತ್’ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಪರೀಕ್ಷಾ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ಮೆರವಣಿಗೆ ಸಾಗುತ್ತಿದ್ದ ವೇಳೆ ಪ್ರತಿಭಟನಾಕಾರರು ಸಂಸತ್ ಕಡೆಗೆ ನುಗ್ಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ದೆಹಲಿ ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿದ್ದು, ಘರ್ಷಣೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಇನ್ನೊಂದೆಡೆ, ಪರಿಸರವಾದಿ ಸೋನಂ ವಾಂಗ್‌ಚುಕ್ ಬೆಂಬಲಿಸಿ ಉಪವಾಸ ನಡೆಸಿದ್ದ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ, ಸರ್ಕಾರದೊಂದಿಗೆ ಮಾತುಕತೆ ನಡೆಸುವ ಭರವಸೆ ದೊರೆತ ಬಳಿಕ ತಮ್ಮ ಉಪವಾಸವನ್ನು ಹಿಂಪಡೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

