ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹುಳುವಿನಾಳ್ ಗೇಟ್ ಸಮೀಪ ಬುಲೆರೋ ಪಿಕಪ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬುಲೆರೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರನ್ನು ಯಾದಗಿರಿ ಜಿಲ್ಲೆಯ ಶೋರಾಪುರ ತಾಲೂಕಿನ ಬರದೇವನಾಳ ಗ್ರಾಮದ ಪ್ರಭು (28) ಹಾಗೂ ಹನುಮಂತ (40) ಎಂದು ಗುರುತಿಸಲಾಗಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಬುಲೆರೋ ನಡುವೆ ಈ ಅಪಘಾತ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

