Breaking News

ಮೈಸೂರಲ್ಲಿ ಘೋರ ದುರಂತ : ಹೆಂಡತಿ ಇಬ್ಬರು ಮಕ್ಕಳನ್ನು ಕೊಂದು, ಪತಿ ಆತ್ಮಹತ್ಯೆಗೆ ಶರಣು!

ಮೈಸೂರು : ರಾಜ್ಯದಲ್ಲಿ ಮತ್ತೊಂದು ಘೋರವಾದ ದುರಂತ ಒಂದು ಸಂಭವಿಸಿದ್ದು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ.ನ್ಯೂ ಮಾರುತಿ ಬಡಾವಣೆಯ ಮನೆ ಒಂದರಲ್ಲಿ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಲೆಗೈದು ಹರೀಶ್ (43) ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಪತಿ ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *