ಬೆಂಗಳೂರು ಹೆಗ್ಗಡದೇವನಪುರದಲ್ಲಿ ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದ ಖದೀಮನೊಬ್ಬ ಗರ್ಭಿಣಿ ಮಹಿಳೆಯನ್ನು ನಂಬಿಸಿ ಸುಮಾರು ₹1.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ಮೋಹನ್ ಅವರ ಮನೆಗೆ ಬಂದ ಆರೋಪಿ, “ಮನೆಯಲ್ಲಿ ದೋಷವಿದೆ, ಸಾವಿನ ಕಂಟಕ ಇದೆ” ಎಂದು ಹೆದರಿಸಿ ಉಚಿತ ಪೂಜೆ ಮಾಡುವುದಾಗಿ ಹೇಳಿ ಮನೆಯಲ್ಲಿದ್ದ ಚಿನ್ನಾಭರಣವನ್ನು ಕುಡಿಕೆಯಲ್ಲಿ ಹಾಕುವಂತೆ ನಂಬಿಸಿದ್ದಾನೆ. ಬಳಿಕ ನೀರು ತರುವ ನೆಪದಲ್ಲಿ ಕುಡಿಕೆಯನ್ನು ಬದಲಾಯಿಸಿ ವಂಚನೆ ಎಸಗಿದ್ದಾನೆ. ದಂಪತಿ ಮನೆಗೆ ವಾಪಸ್ ಬಂದಾಗ ಚಿನ್ನಾಭರಣ ಕಳುವಾಗಿರುವುದು ಗೊತ್ತಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

