ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಮಹಿಳಾ ಎಂಜಿನಿಯರ್ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಮಾಧವ್ ರಾವ್, ಎಇ ಗೌತಮ್ ಹಾಗೂ ಎಇ ರುಚಿತಾ ಅವರ ಮೇಲೆ ಹಲ್ಲೆ ನಡೆದಿದೆ. ರುಚಿತಾ ಅವರ ಮೇಲೆ ಪೆಪ್ಪರ್ ಸ್ಪ್ರೇ ಬಳಸಲಾಗಿದೆ ಎನ್ನಲಾಗಿದ್ದು, ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ. ಶಿವಾಜಿನಗರ ಬಸ್ ನಿಲ್ದಾಣದ ಸುತ್ತಮುತ್ತ ಅಕ್ರಮ ಒತ್ತುವರಿ ತೆರವುಗೊಳಿಸುತ್ತಿದ್ದ ವೇಳೆ ಕೆಲವರು ಕಾರ್ಯಾಚರಣೆಗೆ ಅಡ್ಡಿಪಡಿಸಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಬಳಿಕ ಹಲ್ಲೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

